ಪುತ್ತೂರು : ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಎಂಬಾತನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಿಕೊಳ್ಳಲಾಗಿದೆ.
ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್‌ಎ ಪರೀಕ್ಷೆಗೆ ಸಂತ್ರಸ್ತೆ, ಮಗು ಹಾಗೂ ಆರೋಪಿಯ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶ್ರೀಕೃಷ್ಣನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಸಂತ್ರಸ್ತೆ, ಆಕೆಯ ಮಗು ಹಾಗೂ ಸಂತ್ರಸ್ತೆಯ ತಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.