ದಾವಣಗೆರೆ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಶ್ರೀರಾಮಸೇನೆ ಮುತಾಲಿಕ್ ಗೋವು ರಕ್ಷಣೆ ಮಾಡಿದ್ದಾರೆ.
ಗೋವು ಸಾಗಾಟ ಮಾಡುತ್ತಿದ್ದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಗೋವು ರಕ್ಷಿಸಿದ್ದಾರೆ. ದಾವಣಗೆರೆ ನಗರದ ಕುಂದುವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಗೋವುಗಳನ್ನು ತುಂಬಿಕೊಂಡು ಕಸಾಯಿಖಾನೆಗೆ ಸಾಗಾಟ ಮಾಡುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ದಾಳಿ ನಡೆಸಿದ್ದರು. ಸಣ್ಣ ಗಾಡಿಯಲ್ಲಿ ನಾಲ್ಕು ದೊಡ್ಡ ಹಸು ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಹುಬ್ಬಳ್ಳಿಯಿಂದ ದಾವಣಗೆರೆಗೆ ಆಗಮಿಸುತ್ತಿದ್ದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅನುಮಾನಗೊಂಡು ಗಾಡಿ ನಿಲ್ಲಿಸಿ ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ದಾಖಲೆ ಇಲ್ಲದೇ ಹಸುಗಳ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಆನಂತರ ಕೂಡಲೇ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.