ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC Recruitment 2025) 2025ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 1,340 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟಿಕಲ್ ವಿಭಾಗಗಳ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗದ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಹುದ್ದೆಗಳ ವಿವರ
ಸಂಸ್ಥೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್
ಒಟ್ಟು ಹುದ್ದೆಗಳು : 1,340
ಹುದ್ದೆ ಹೆಸರು : ಜೂನಿಯರ್ ಎಂಜಿನಿಯರ್
ಉದ್ಯೋಗ ಸ್ಥಳ : ದೇಶಾದ್ಯಂತ
ವೇತನ ಶ್ರೇಣಿ : 35,400 – 1,12,400 ರೂ.
ವಿದ್ಯಾರ್ಹತೆ ಏನು?
ಅಭ್ಯರ್ಥಿಗಳು ಡಿಪ್ಲೋಮಾ ಅಥವಾ ಬಿಇ/ಬಿಟೆಕ್ (ಸಿವಿಲ್/ ಮೆಕಾನಿಕಲ್/ ಎಲೆಕ್ನಿಕಲ್) ವಿಭಾಗದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಗರಿಷ್ಠ ವಯಸ್ಸು 32 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಒಬಿಸಿಯವರಿಗೆ ಮೂರು ವರ್ಷ ಹಾಗೂ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಜನರಲ್ ಹಾಗೂ ಒಬಿಸಿ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ (ವಸ್ತುನಿಷ್ಠ), ಕಂಪ್ಯೂಟರ್ ಆಧಾರಿತ (ತಾಂತ್ರಿಕ ವಿಷಯ) ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಎಸ್ ಎಸ್ ಸಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾದರೆ, ಜುಲೈ 22 ಫೀಸ್ ಕಟ್ಟಲು ಕೊನೆಯ ದಿನವಾಗಿದೆ.