ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನೇಮಕಾತಿ ಆಯೋಗವು 1,748 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು (SSC Recruitment 2026) ಆಹ್ವಾನಿಸಿದೆ. ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆ ಹೆಸರು: ಜೂನಿಯರ್ ಎಂಜಿನಿಯರ್
ಒಟ್ಟು ಹುದ್ದೆ: 1,748
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 22
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಬಿ.ಇ, ಬಿ.ಟೆಕ್ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.12 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಒಬಿಸಿ, ಇಡಬ್ಲ್ಯೂಎಸ್ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕವಿರುವುದಿಲ್ಲ. ಎರಡು ಬಾರಿ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ssc.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ



















