ಬೆಂಗಳೂರು : ದೇಶದ ಹಲವು ಭದ್ರತಾ ಪಡೆಗಳಲ್ಲಿ ಖಾಲಿ ಇರುವ 1,871 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸಿಆರ್ ಪಿಎಫ್ ಸೇರಿ ಹಲವು ಭದ್ರತಾ ಪಡೆಗಳಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗವು (SSC Recruitment 2026) ಇದಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ.
ನೇಮಕಾತಿ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ
ಒಟ್ಟು ಹುದ್ದೆಗಳು: 1,871
ಹುದ್ದೆಗಳ ಹೆಸರು: ಸಬ್ ಇನ್ಸ್ ಪೆಕ್ಟರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 30
ಉದ್ಯೋಗ ಸ್ಥಳ: ದೇಶಾದ್ಯಂತ
ಸಿಆರ್ ಪಿಎಫ್ ನಲ್ಲಿ 254, ಬಿಎಸ್ಎಫ್ ನಲ್ಲಿ 457, ಐಟಿಬಿಪಿಯಲ್ಲಿ 187, ಸಿಐಎಸ್ಎಫ್ ನಲ್ಲಿ 484, ಎಸ್ ಎಸ್ ಬಿಯಲ್ಲಿ 172 ಹಾಗೂ ದೆಹಲಿ ಪೊಲೀಸ್ ಇಲಾಖೆಯಲ್ಲಿ 317 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 100 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : 6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!


















