ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ ಮುಗಿಸಿ ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಕ್ರಟೇರಿಯಟ್ ಸೆಕ್ಯುರಿಟಿ ಫೋರ್ಸ್ ನಲ್ಲಿ (SSF Constable Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಕ್ರಟೇರಿಯಟ್ ಸೆಕ್ಯುರಿಟಿ ಫೋರ್ಸ್
ಹುದ್ದೆಗಳ ಹೆಸರು: ಕಾನ್ ಸ್ಟೆಬಲ್
ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 28
ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 63 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನಿಷ್ಠ 18ರಿಂದ 23 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಒಬಿಸಿಯವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ವಿನಾಯಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ itbpolice.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಡಾಕ್ಟರ್ ಆಗಲಿ ಎಂದಿದ್ದ ತಂದೆ, ಬೆನ್ನೆಲುಬಾಗಿ ನಿಂತ ಇರ್ಫಾನ್ ಪಠಾಣ್ – IPL ಕೋಟಿವೀರ ‘ಆಕಿಬ್ ನಬಿ’ಯ ರೋಚಕ ಹಾದಿ!



















