ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ 22 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಪಾಸಾಗಿದ್ದಾರೆ.
ಈ ಬಾರಿ ಬರೋಬ್ಬರಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಈ ಮಧ್ಯೆ ವಿದ್ಯಾರ್ಥಿಗಳಿಗೆ ಪರೀಕ್ಷೆ -2 ಮತ್ತು ಪರೀಕ್ಷೆ-3 ವೇಳಾಪಟ್ಟಿ ಪ್ರಕಟಿಸಲಾಗಿದೆ. ಫಲಿತಾಂಶ ಸುಧಾರಿಸಿಕೊಳ್ಳುವ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.
SSLC ಪರೀಕ್ಷೆ 2, ಮೇ 26 ರಿಂದ ಜೂನ್ 2 ವೆರೆಗೆ ನಡೆಯಲಿದೆ. ಮರು ಪರೀಕ್ಷೆಗೆ ಯಾವುದೇ ಶುಲ್ಕ ಇರುವುದಿಲ್ಲ.
SSLC ಪರೀಕ್ಷೆ 3, ಜೂನ್ 23 ರಿಂದ ಜೂನ್ 30ರ ವರೆಗೆ ನಡೆಯಲಿವೆ.