ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ 3 ಆರಂಭವಾಗಲಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿದ್ದು, ಯಾವುದೇ ನಕಲು ಮಾಡದಂತೆ ಎಚ್ಚರಿಕೆ ವಹಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದೆ.
ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸರಳ ಕ್ಯಾಲ್ಕುಲೇಟರ್‌ಗಳನ್ನು ಮಾತ್ರ ಬಳಸಲು ಅವಕಾಶ ನೀಡಲಾಗಿದೆ. ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ವೇಳಾಪಟ್ಟಿ
ಜುಲೈ 05 ರಿಂದ 11 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನಡೆಯಲಿದೆ
ಜುಲೈ 05 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರ ವರೆಗೆ ಪ್ರಥಮ ಭಾಷೆ
ಜುಲೈ 07ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರ ವರೆಗೆ ವಿಜ್ಞಾನ
ಜುಲೈ 08ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ದ್ವಿತೀಯ ಭಾಷೆ
ಜುಲೈ 09ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರ ವರೆಗೆ ಗಣಿತ
ಜುಲೈ 10ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ತೃತೀಯ ಭಾಷೆ
ಜುಲೈ 11ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿವೆ.