ಬೆಂಗಳೂರು : ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ
ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಡೀಪ್‌ಫೇಕ್ ದಳ್ಳುರಿ ವಿರುದ್ಧ ಗಂಭೀರ್ ಕಾನೂನು ಸಮರ.. ದೆಹಲಿ ಹೈಕೋರ್ಟ್‌ನಿಂದ ಮಹತ್ವದ ಆದೇಶ!


















