ಬೆಂಗಳೂರು : ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವು ಇಂದು ಅಧಿಕೃತವಾಗಿ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದ್ದು, ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರು ಎಂದು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು, ಅದರಲ್ಲಿ ಶೇ.74ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 94.01 ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
SSLC ಫಲಿತಾಂಶ ಚೆಕ್ ಮಾಡುವ ವಿಧಾನ
- ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ.
- ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
- ಫಲಿತಾಂಶದ ಪೇಜ್ ಓಪನ್ ಆಗುತ್ತದೆ.
- ಡೌನ್‌ಲೋಡ್ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಗ್ರೇಡ್ ಬದಲಿಗೆ ಅಂಕ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆ ವಿಷಯಗಳಿಗೆ ಅಂಕ ಬದಲಿಗೆ ಗ್ರೇಡ್ ನೀಡಲು ಸರ್ಕಾರ ಮುಂದಾಗಿತ್ತು. ಏಕಾಏಕಿ ಈ ನಿರ್ಧಾರದಿಂದ ವಿದ್ಯಾರ್ಥಿಗಳಲ್ಲಿ ಕೊಂಚ ಗೊಂದಲ, ಅಸಮಾಧಾನ ಉಂಟಾಗಿತ್ತು. ಆದ್ರೆ, ಇದೀಗ ಹೈಕೋರ್ಟ್, ಗ್ರೇಡ ಬದಲಿಗೆ ಅಂಕ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಆದೇಶಿಸಿದೆ. ಹೀಗಾಗಿ ಇದೀಗ ಅಂತಿಮವಾಗಿ ಕೋರ್ಟ್ ಆದೇಶದಂತೆ ಗ್ರೇಡ್ ಕೈಬಿಟ್ಟು ಅಂಕ ನೀಡಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ : ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!



















