ಬೆಂಗಳೂರು : 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ (ಏಪ್ರಿಲ್ 23) ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್ ಸಂಬಂಧಿತ ಮಾಹಿತಿ ನೀಡಿದ್ದಾರೆ.
ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್ಎಸ್ಎಲ್ಸಿಯಲ್ಲಿ ಶೇ.94.1 ಮಂದಿ ಪಾಸ್ ಆಗಿದ್ದಾರೆ.
ದಕ್ಷಿಣ ಕನ್ನಡ ಫಸ್ಟ್, ಕಲಬುರಗಿ ಲಾಸ್ಟ್
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಆ್ಯಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗಿದೆ. ಜತೆಗೆ ಫಲಿತಾಂಶ ಪಟ್ಟಿಯು ಶಾಲೆಗಳಲ್ಲಿ ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಿದೆ. ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ನೀಡಲಾಗಿದೆ. ಅಲ್ಲಿಯೇ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಧಿಕೃತ ವೆಬ್‌ಸೈಟ್ ಯಾವುದು?
https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.
ಇದನ್ನೂ ಓದಿ : SSLC ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊದಲ ಬಾರಿಗೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ!



















