ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಕಳಸ (Kalasa) ಪಟ್ಟಣದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ (School) ವಿದ್ಯಾರ್ಥಿ (SSLC Student) ಶವವಾಗಿ ಪತ್ತೆಯಾಗಿದ್ದಾನೆ. ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಹೀಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಾಲಕ ಎನ್ನಲಾಗಿದೆ.
ಈ ಬಾಲಕ ಮಾ.16ರಂದು ಕಾಣೆಯಾಗಿದ್ದ. ಅಂದು ಶಾಲೆಗೆ ಹೋದವನು ಮರಳಿ ಬಂದಿರಲಿಲ್ಲ. ಈ ಕುರಿತು ಪೋಷಕರು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಮಾ.19ರಂದು ಭದ್ರಾ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನವನಾಗಿದ್ದು, ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದು ವ್ಯಾಸಾಂಗ ಮಾಡುತ್ತಿದ್ದ. ಪರೀಕ್ಷೆಗೆ 2 ದಿನ ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಅನುಮಾನಗಳಿಗೆ ದಾರಿ ಮಾಡಿ ಕೊಟ್ಟಿದೆ. ಈಜಲು ಹೋಗಿ ಸಾವನ್ನಪ್ಪಿದ್ದಾನಾ? ಯಾರಾದರೂ ದೂಡಿದರಾ? ಆತ್ಮಹತ್ಯೆ ಮಾಡಿಕೊಂಡನಾ? ಹೀಗೆ ಹಲವು ಅನುಮಾನಗಳು ಕಾಡುತ್ತಿವೆ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.