ಬೀಜಿಂಗ್: ಚೀನಾದಲ್ಲಿ ವಿದ್ಯಾರ್ಥಿಯೊಬ್ಬ ಚಾಕು ಇರಿದ ಪರಿಣಾಮ 8 ಜನ ಸಾವನ್ನಪ್ಪಿ, 17 ಜನ ಗಾಯಗೊಂಡಿದ್ದಾರೆ.
ಚೀನಾದ ವುಕ್ಸಿ ನಗರದಲ್ಲಿ ಈ ಘಟನೆ ನಡೆದಿದೆ. ದಾಳಿಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿ, 17 ಗಾಯಗೊಂಡಿದ್ದಾರೆ. ಘಠನೆಯ ವಿಡಿಯೋ ವೈರಲ್ ಆಗಿದೆ.
ಆರೋಪಿಯು 21 ವರ್ಷದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸಿದ್ದಾನೆ. ಪರಿಣಾಮ 17 ಜನ ಕೂಡ ಗಾಯಗೊಂಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ, ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.