ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ 2,423 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಇಂಜಿನಿಯರ್, ಟೆಕ್ನಿಕಲ್ ಅಟೆಂಡೆಂಟ್, ಎಂಟಿಎಸ್, ಫೈರ್ ಮನ್, ಸ್ಟೋರ್ ಕೀಪರ್, ಟೆಕ್ನಿಷಿಯನ್, ರೇಡಿಯೋಗ್ರಾಫರ್ ಮತ್ತು ಕ್ಲರ್ಕ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪಡೆದಿರಬೇಕು. ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಬೇರೆ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಜೂನ್ 23 ಕೊನೆಯ ದಿನವಾಗಿದೆ. https://ssc.gov.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 34,800 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.