ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಚಿನ್ನಸ್ವಾಮಿ ಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಹೇಳಿಕೆ ಆಧರಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!!
ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರೇ..
ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ
ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?
ದಯವಿಟ್ಟು ಹೇಳುವಿರಾ?
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ?
ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ?
ಮೆಟ್ಟಿಲು ಮುಖ್ಯಮಂತ್ರಿ ಎಂದು ವ್ಯಂಗ್ಯವಾಡಿದ್ದಾರೆ.