ಆರ್ ಸಿಬಿ ವಿಜಯೋತ್ಸವದಲ್ಲಿ 11 ಅಭಿಮಾನಿಗಳ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಧಾನಿಯಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಇಂದು ಕಾಲ್ತುಳಿತ ಘಟನೆ ಖಂಡಿಸಿ ಮೂರು ಸಂಘಟನೆಗಳು ಸರಣಿ ಪ್ರತಿಭಟನೆ ನಡೆಸಿವೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ದಯಾನಂದ್ ತಲೆದಂಡವಾಗಿದ್ದನ್ನು ಖಂಡಿಸಿ ಕಮಿಷನರ್ ಪರ ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಬೃಹತ್ ತಮಟೆ ಚಳುವಳಿ ಮೂಲಕ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಅಮಾನತ್ತು ಹಿಂಪಡೆಯುವಂತೆ ಒತ್ತಾಯಿಸಲಾಯಿತು.
ಈ ದುರ್ಘಟನೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದು ಸರ್ಕಾರದ ಅವ್ಯವಸ್ಥಿತಿ ಕಾರ್ಯಕ್ರಮ. ಪ್ರಚಾರಕ್ಕಾಗಿ ಪ್ರಚಾರಕ್ಕಾಗಿ ಹೀಗೆ ಮಾಡಿದೆ. ಈಗ ಜನರ ಸಾವಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.



















