ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಕುನ್ಹಾ ವರದಿ ಶಿಫಾರಸು ಜಾರಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ.
ಆರ್‌ಸಿಬಿ, ಕೆಎಸ್‍ಸಿಎ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಪುಟ ಸಭೆ ಅಧಿಕೃತ ಒಪ್ಪಿಗೆ ನೀಡಿದೆ.
ಈ ಪ್ರಕರಣದಲ್ಲಿ ಪೊಲೀಸರ ತಪ್ಪಿದೆ. ಅವರ ವಿರುದ್ಧ ಕೂಡ ಇಲಾಖಾ ತನಿಖೆ ಆಗಬೇಕು ಎಂದು ಸಚಿವರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ. ಅಷ್ಟಲ್ಲದೇ ಡಿಎನ್‍ಎ ಈವೆಂಟ್ ಮ್ಯಾನೇಜ್ಮೆಂಟ್ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.
ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಜುಲೈ 12 ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಆರ್‌ಸಿಬಿಯ ಜೊತೆ ಬೆಂಗಳೂರು ಪೊಲೀಸರು ಶಾಮೀಲಾಗಿರುವ ಕಾರಣ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.



















