ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ 11 ಜನ ಸಾವನ್ನಪ್ಪಿ, 47 ಜನ ಗಾಯಗೊಂಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ವಿಷಯವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಘಟನೆಯಲ್ಲಿ 47 ಜನ ಗಾಯಗೊಂಡಿದ್ದಾರೆ. ಅವರ ಚಿಕಿತ್ಸೆಗೆ ಸರ್ಕಾರವೇ ಹಣ ಭರಿಸುತ್ತದೆ. ಈಗಾಗಲೇ ನಾನು ವೈದ್ಯರೊಂದಿಗೆ ಮಾತನಾಡಿದ್ದೇನೆ. ಕೆಲವರು ಕೇವಲ ಚಿಕಿತ್ಸೆ ಪಡೆದು ಹೋಗಿದ್ದಾರೆ. ಹೋದವರು ಔಟ್ ಆಪ್ ಡೇಂಜರ್ ಎಂದು ಡಾಕ್ಟರ್ಸ್ ಹೇಳಿದ್ದಾರೆ. ಕಾಲ್ತುಳಿತಕ್ಕೆ ಒಳಗಾಗಿ ಹಲವರು ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ವಾರಸುದಾರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಅನಿರೀಕ್ಷಿತವಾಗಿ ಈ ಘಟನೆ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸುತ್ತೇವೆ. ಪ್ರತಿಯೊಂದು ವಿಷಯದಲ್ಲೂ ಬಿಜೆಪಿ ರಾಜಕಾರಣ ಮಾಡುತ್ತದೆ. ಆದರೆ, ನಾನು ರಾಜಕಾರಣ ಮಾಡಲ್ಲ. ಹೀಗಾಗಿಯೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.