ಬೆಳಗಾವಿ: ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿದ್ದ ಸ್ಟಾರ್ ಏರ್ ಲೈನ್ಸ್ ಬೆಳಗಾವಿಯಲ್ಲಿ ಲ್ಯಾಂಡ್ ಆಗಿದೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್ ಲೈನ್ಸ್ ಲ್ಯಾಂಡ್ ಆಗಿದೆ. ತಿರುಪತಿಯಿಂದ ಶಿವಮೊಗ್ಗಕ್ಕೆ ಹೋಗಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಬೆಳಗಾವಿಯಲ್ಲಿ ಲ್ಯಾಂಡ್ ಆಗಿದೆ. ಶಿವಮೊಗ್ಗದಲ್ಲಿ ವಿಪರೀತ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ವಿಮಾನ ಲ್ಯಾಂಡ್ ಆಗಿದೆ.
ಏರ್ ಲೈನ್ಸ್ ಸಿಬ್ಬಂದಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡುವುದಾಗಿ ಸಿಬ್ಬಂದಿ ನೀಡಿದ ಭರವಸೆಯಿಂದಾಗಿ ವಿಮಾನದಿಂದ 60 ಪ್ರಯಾಣಿಕರು ಕೆಳಗೆ ಇಳಿದಿದ್ದರು. ಆದರೆ, ಇಳಿದ ಕೂಡಲೇ ಏರ್ ಲೈನ್ಸ್ ಸಿಬ್ಬಂದಿ ಪರ್ಯಾಯ ವ್ಯವಸ್ಥೆ ಅಸಾಧ್ಯ ಎಂದಿದ್ದಾರೆ. ಹೀಗಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ.