ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಇಂದು (ಸೋಮವಾರ) ರಾಜ್ಯ ಬಿಜೆಪಿ ಆಯೋಜಿಸಿದ್ದ” ಧರ್ಮಸ್ಥಳ ಚಲೋ” ಮತ್ತು ಧರ್ಮಸ್ಥಳದಲ್ಲಿ ಧರ್ಮಯಾತ್ರೆ ಬೃಹತ್ ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಾಯಕರ ತಂಡ ಸೌಜನ್ಯ ಮನೆಗೆ ಭೇಟಿ ನೀಡಿದೆ.
ವಿಜಯೇಂದ್ರ ಯಡಿಯೂರಪ್ಪ ಸೌಜನ್ಯಳ ತಾಯಿ ಕುಸುಮಾವತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ನ್ಯಾಯ ದೊರಕಿಸಿಕೊಡುವುದರಲ್ಲಿ ನಮ್ಮ ಬೆಂಬಲವೂ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ.
ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಪ್ರೀತಮ್ ಗೌಡ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿ ಇತರರು ಉಪಸ್ಥಿತರಿದ್ದರು.
ಬೃಹತ್ ಸಮಾವೇಶ ನಡೆದ ಬೆನ್ನಲ್ಲೇ ಸೌಜನ್ಯಳ ಮನೆಗೆ ನೀಡಿದ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ. ಮಾನವೀಯತೆ ಹಾಗೂ ಸಾಂತ್ವಾನ ನೀಡುವ ನಿಟ್ಟಿನಲ್ಲಿ ಈ ಭೇಟಿ ನೀಡಲಾಗಿದೆ ಎಂದು ರಾಜ್ಯ ಬಿಜೆಪಿ ಹೇಳಿಕೊಂಡಿದೆ.