ಧಾರವಾಡ : ಬಿಜೆಪಿ ಘಟಕದ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ ಜೋಶಿ, ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರೊಂದಿಗೆ ಚರ್ಚಿಸಿ ಚುನಾವಣೆ ಪ್ರಕ್ರಿಯೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.
ʼಬಿ. ವೈ. ವಿಜಯೇಂದ್ರ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒಂದು ಗುಂಪಿನ ಒತ್ತಾಯ ಇದೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ವಿಜಯೇಂದ್ರ ಹಾಗೂ ಸೋಮಣ್ಣ ನಾನೇ ಅಧ್ಯಕ್ಷ ಆಗಬೇಕು ಎಂದು ಹೇಳಿಲ್ಲವೆಂದು ಹೇಳಿದ್ದಾರೆ.



















