ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ನಡೆದಿದೆ. ಹನಿಟ್ರ್ಯಾಪ್ ಕಿತ್ತಾಟ ಶುರುವಾಗಿದೆ. ಹೀಗಾಗಿಯೇ ಮಲ್ಲಿಕಾರ್ಜುನ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಬಂದಿರುವುದು ಸಿದ್ದರಾಮಯ್ಯರ ಆರೋಗ್ಯ ವಿಚಾರಿಸಲು ಅಲ್ಲ. ಕಾಲು ನೋವು ಕಾರಣದಿಂದಾಗಿ ಸಿದ್ದರಾಮಯ್ಯ ಗಾಲಿ ಕುರ್ಚಿಗೆ ಬಂದು ಎರಡು ತಿಂಗಳು ಆಯಿತು. ಈಗ ಚೇರ್ ಬಿಟ್ಟು ವಾಕ್ ಸ್ಟಿಕ್ ಹಿಡಿದು ಓಡಾಡುತ್ತಿದ್ದಾರೆ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಹೋಗಿಲ್ಲ ಎಂದು ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಅಮಾನತು ಆದೇಶ ವಾಪಸು ಪಡೆಯಬೇಕು. ಸ್ಪೀಕರ್ ಜೊತೆ ಈ ಕುರಿತು ಮಾತನಾಡಿದ್ದೇನೆ. ಹಬ್ಬ ಮುಗಿಯಲಿ ಮಾತನಾಡೋಣ ಅಂದಿದ್ದಾರೆ. ನಮ್ಮ ಶಾಸಕರ ಮೇಲೆ ನಮಗೆ ಗೌರವವಿದೆ ಎಂದಿದ್ದಾರೆ.