ಬೆಂಗಳೂರು: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಸುದೀಪ್ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಈ ಪ್ರಶಸ್ತಿ ಪಡೆದಿದ್ದಾರೆ. ನಟಿ, ನಿರೂಪಕಿ ಅನುಪಮಾ ಗೌಡಗೆ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ಲಭಿಸಿದೆ.
ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಎಸ್. ಕೃಷ್ಣ ನಿರ್ದೇಶನದ ಪೈಲ್ವಾನ್ ಚಿತ್ರದಲ್ಲಿ ಸುದೀಪ್ ಕುಸ್ತಿಪಟು ಆಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಭಾರೀ ಯಶಸ್ಸು ಕಂಡಿತ್ತು. ಈಗ ಆ ಪ್ರಶಸ್ತಿಯ ಅಭಿನಯಕ್ಕೆ ಸುದೀಪ್ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದು, ಅಭಿಮಾನಿಗಳು ಸಂತಸ ಪಡುತ್ತಿದ್ದಾರೆ.
ಅಲ್ಲದೇ, ಪಿ. ಶೇಷಾದ್ರಿ ನಿರ್ದೇಶನ ಮಾಡಿದ ‘ಮೋಹನದಾಸ’ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿ ಸಿಕ್ಕಿದೆ. ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ಟೇಲ್’ 2ನೇ ‘ಅತ್ಯುತ್ತಮ ಸಿನಿಮಾ’ ಹಾಗೂ ‘ಅರ್ಘ್ಯಂ’ 3ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ. ‘ಕನ್ನೇರಿ’ ಚಿತ್ರಕ್ಕೆ ‘ವಿಶೇಷ ಸಾಮಾಜಿಕ ಕಾಳಜಿಯ ಸಿನಿಮಾ’ ಪ್ರಶಸ್ತಿ ಪಡೆದಿದೆ.
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ:
ಅತ್ಯುತ್ತಮ ನಟ: ಸುದೀಪ್
‘ಪೈಲ್ವಾನ್’ ಚಿತ್ರ
ಅತ್ಯುತ್ತಮ ನಟಿ: ಅನುಪಮಾ ಗೌಡ
‘ತ್ರಯಂಬಕಂ’ ಸಿನಿಮಾ
ಅತ್ಯುತ್ತಮ ಮೊದಲ ಚಿತ್ರ : ಮೋಹನದಾಸ
ಪಿ. ಶೇಷಾದ್ರಿ ನಿರ್ದೇಶನದ ಚಿತ್ರ
ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೈಲ್’ ಸಿನಿಮಾ
ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ
ತೃತೀಯ ಅತ್ಯುತ್ತಮ ಚಿತ್ರ : ‘ಅರ್ಘ್ಯಂ’
ವೈ ಶ್ರೀನಿವಾಸ್ ನಿರ್ದೇಶನದ ಚಿತ್ರ
ಅತ್ಯುತ್ತಮ ಪೋಷಕ ನಟ:
ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ:
ಅನೂಷಾ ಕೃಷ್ಣ (ಬ್ರಾಹ್ಮಿ)
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ ಸಿನಿಮಾ
ಮಂಜುನಾಥ್ ಎಸ್ ನಿರ್ದೇಶನ
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ v/s ಇಂಗ್ಲೆಂಡ್ ಸಿನಿಮಾ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನ
ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು ಸಿನಿಮಾ
ಜಿ. ಅರುಣ್ ಕುಮಾರ್ ನಿರ್ದೇಶನ
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ
ನಾಗೇಶ್ ಎನ್. ನಿರ್ದೇಶನ
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್ ತಲಾಕ್ (ಬ್ಯಾರಿ ಭಾಷೆ)
ಯೂಕೂಬ್ ಖಾದರ್ ಗುಲ್ವಾಡಿ
ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ ( ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)
ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ- ಲವ್ ಮಾಕ್ಟೈಲ್ ಸಿನಿಮಾ
ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)
ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್
ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್
ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)
ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೈಲ್)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಿಂಗಮ ಶೆಟ್ಟಿ ( ರಾಗಭೈರವಿ ಚಿತ್ರ)
ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ
ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)