ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮೂವರು ಹಿರಿಯ IPS ಅಧಿಕಾರಿಗಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
2004ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್‌ನ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಯಿಂದ ವರ್ಗಾವಣೆ ಮಾಡಿ, ಬೆಳಗಾವಿಯ ಉತ್ತರ ವಲಯದ ಇನ್ಸ್‌ಪೆಕ್ಟರ್ ಜನರಲ್ ಆಗಿ (IGP) ನಿಯೋಜಿಸಲಾಗಿದೆ. ಈ ಹುದ್ದೆಯಲ್ಲಿದ್ದ 2007ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಚೇತನ್ ಸಿಂಗ್ ರಾಠೋಡ್ ಅವರನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್(ಆರ್ಥಿಕ ಅಪರಾಧ ವಿಭಾಗ)ಗೆ ವರ್ಗಾಯಿಸಲಾಗಿದೆ.
ಇನ್ನು, ಪೋಸ್ಟಿಂಗ್ ನಿರೀಕ್ಷೆಯಲ್ಲಿದ್ದ 2008ನೇ ಬ್ಯಾಚ್ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರಿಗೆ ಕೂಡ ತಕ್ಷಣದಿಂದಲೇ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರಿಂದ ತೆರವಾದ ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್‌ನ (KSRP) ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಆದೇಶದಲ್ಲಿ, ಕೆಎಸ್‌ಆರ್‌ಪಿ ಐಜಿಪಿ ಹುದ್ದೆಯನ್ನು ‘ಪೊಲೀಸ್ ಕಂಪ್ಯೂಟರ್ ವಿಭಾಗದ ಐಜಿಪಿ’ ಹುದ್ದೆಯ ಸ್ಥಾನಮಾನ ಮತ್ತು ಜವಾಬ್ದಾರಿಗಳಿಗೆ ಸಮಾನವಾದ ಹುದ್ದೆ ಎಂದು ಘೋಷಿಸಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಈ ವರ್ಗಾವಣೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಇದನ್ನೂ ಓದಿ : ಟ್ಯಾಂಕರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ



















