ಬೆಂಗಳೂರು: ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಬಳಕೆ ವಿಚಾರವಾಗಿ ರಾಜ್ಯ ಸರ್ಕಾರವು ನಾಳೆ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ತಾಂತ್ರಿಕ ವರದಿ ಮತ್ತು ಪ್ರಯೋಗಾಲಯದ ಪರೀಕ್ಷೆ ವರದಿಗಳನ್ನು ಸರ್ಕಾರ ಕ್ರೋಢೀಕರಿಸುತ್ತಿದೆ. ಈಗಾಗಲೇ 60ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳಲ್ಲಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಶೇಕಡಾ 20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಬಳಕೆಯಾಗಿರುವುದು ಕಂಡುಬಂದಿದೆ. ಈ ವರದಿ ಆಧರಿಸಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ. ಕೇಂದ್ರ ಕ್ರಮ ಕೈಗೊಳ್ಳದಿದ್ದರೆ ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಎಥೆನಾಲ್ ಬಳಕೆಗೆ ಪೆಟ್ರೋಲ್ ಬಂಕ್ ಮಾಲೀಕರು ಕಾರಣವಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲಿಯಂ ಟರ್ಮಿನಲ್ಗಳ ಹಂತದಲ್ಲೇ ಈ ಲೋಪವಾಗುತ್ತಿದ್ದು ಬಂಕ್ ಮಾಲೀಕರನ್ನು ಹೊಣೆ ಮಾಡುವುದಿಲ್ಲ ಎಂದಿದ್ದಾರೆ. ಈ ವಿಚಾರವನ್ನು ಎಐಸಿಸಿ ಮಟ್ಟಕ್ಕೂ ಕೊಂಡೊಯ್ಯಲು ಮುಂದಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ.


















