ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿಯ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯ ವರದಹಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ನಿರಂತರವಾಗಿ ಸ್ಯಾನಿಟೈಸ್ ಹಾಗೂ ಬ್ಲೀಚಿಂಗ್ ಸಿಂಪಡಣೆ ಮಾಡುವ ಮೂಲಕ ಸ್ವಚ್ಚತೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರತಿ ಮನೆಗೂ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸಿಬ್ಬಂದಿ ಹೈಅಲಾರ್ಟ್ ಆಗಿದ್ದು, ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.