ಬೆಂಗಳೂರು: ನಾರಾಯಣಗುರು ಮಹಾಒಕ್ಕೂಟದ ರಾಜ್ಯಮಟ್ಟದ ಸಮಾವೇಶವನ್ನು ಕೇರಳದ ವರ್ಕಳ ಶಿವಗಿರಿ ಮಠದ ಸ್ವಾಮಿ ಋತಂಬರಾನಂದ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಮಠದ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಉಪಸ್ಥಿತರಿದ್ದರು.
ಈ ಸಮಾವೇಶದಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪಾಲ್ಗೊಂಡಿದ್ದರು. ಅಲ್ಲದೆ ಮಾಜಿ ಶಾಸಕ ಹಾಲಪ್ಪ ಮತ್ತು ಅವಧೂತ ವಿನಯ್ ಗುರೂಜಿ ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


















