ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಬಿಜೆಪಿಗಿಂತ ಅಪಾಯಕಾರಿ ಕಾಲಿಯಾ ಕುಮಾರಸ್ವಾಮಿ. ನಮ್ಮ ಕಾಲಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ವಜಾ ಮಾಡಬೇಕೆಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜ್ಯ ಒಕ್ಕಲಿಗರ ಸಂಘ, ಜಮೀರ್ ಅಹ್ಮದ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಮೂಲಕ ಜಮೀರ್ ಕ್ಷಮೆ ಕೇಳಲು ಒತ್ತಾಯಿಸಿದೆ. ಅಲ್ಲದೇ ಸಚಿವ ಸ್ಥಾನದಿಂದ ಕೂಡಲೇ ಜಮೀರ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿದೆ.
ಆದರೆ, ಜಮೀರ್ ಅವರ ಮಾತಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಜಮೀರ್ ಕೂಡ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.