ಬೆಂಗಳೂರು : ಸೋಷಿಯಲ್ ಮೀಡಿಯಾ ಪ್ರಿಯರಿಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶವೊಂದನ್ನು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ ಹಾಗೂ ಸಾರ್ವಜನಿಕ ಶಾಂತಿಭಂಗ, ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪುನರಾವರ್ತಿತ ಚಟುವಟಿಕೆಗಳಿಗೆ ಕಠಿಣ ಕ್ರಮವೊಂದೆ ದಾರಿ ಹಾಗಾಗಿ, ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರ ವಹಿಸಿ ಎಂದು ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆಯ ಸಂದೇಶವನ್ನು ಹಂಚಿಕೊಂಡಿದೆ.



















