ಬೆಂಗಳೂರು: ಹಲವು ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಉಪ ನೋಂದಣಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಫೆ. 27ರಂದು ರಾಜ್ಯದ ಸಬ್ ರಿಜಿಸ್ಟರ್ ಕಚೇರಿಗಳು ಬಂದ್ ಆಗಿರಲಿವೆ ಎನ್ನಲಾಗುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 27ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ಉಪ ನೋಂದಣಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ಆಸ್ತಿ ದಸ್ತಾವೇಜು ನೋಂದಣಿ ಸೇರಿದಂತೆ ಎಲ್ಲಾ ಸೇವೆಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ, ಸರ್ಕಾರದ ಮುಖ್ಯಕಾರ್ಯದರ್ಶಿ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ.
ಬೇಡಿಕೆಗಳೇನು?
ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ ಬಗೆಹರಿಸಬೇಕು
ಫೇಸ್ ಲೆಸ್ ರಿಜಿಸ್ಟ್ರೇಷನ್, ಇಸಿ, ಸಿಸಿ ವಿತರಿಸಲು ಉಂಟಾಗುತ್ತಿರುವ ಸರ್ವರ್ ಸಮಸ್ಯೆ
ಐಟಿ ಅಧಿಕಾರಿಗಳು ಮಾಹಿತಿ ಹೆಸರಿನಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳ
ಉಪ ನೋಂದಣಾಧಿಕಾರಿಗಳ ವರ್ಗಾವಣೆಗಳೂ ಪ್ರತ್ಯೇಕ ನಿಯಮಗಳನ್ನು ರೂಪಿಸಬೇಕು
ಕರ್ನಾಟಕ ನೋಂದಣಿ ಕಾಯ್ದೆಗೆ 22 ಬಿ ಕಲಂ ಸೇರಿಸಿರುವುದರ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.