ಯಾದಗಿರಿ : ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ಸ್ವಯಂಘೋಷಿತ ದೇವಮಾನ ಮುತ್ಯಾಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಈ ಬಗ್ಗೆ ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗ, ಪ್ರಕರಣದ ಗಂಭೀರ ಪರಿಶೀಲನೆಗೆ ಸೂಚನೆ ನೀಡಿದೆ. ಪ್ರಕರಣವನ್ನು ಸಂವೇದನಶೀಲವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ನಿದರ್ಶಿಸಿದೆ.
ಪತ್ರದಲ್ಲೇನಿದೆ?
ಮಲ್ಲಿಕಾರ್ಜುನ ಮುತ್ಯಾ ಎಂಬಾತ ಅಪ್ರಾಪ್ತ ಹೆಣ್ಣು ಮಗಳೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿ, ಲೈಂಗಿಕ ದೌರ್ಜನ್ಯವೆಸಗಿರುವ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ. ಆದ್ದರಿಂದ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುವಂತೆ, ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸೂಚಿಸಿದ್ದಾರೆ. ಇನ್ನು, ಬಾಲಕಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದ್ದು, ಕೈಗೊಂಡ ಕ್ರಮಗಳ ಬಗ್ಗೆ ಆಯೋಗಕ್ಕೆ ವರದಿ ಸಲ್ಲಿಸಲು ತಿಳಿಸಲಾಗಿದೆ.
ಇದನ್ನೂ ಓದಿ : ಐಪಿಎಲ್‌ನಲ್ಲಿ ಹೂಡಿಕೆ ಬಿರುಗಾಳಿ | RCB ಖರೀದಿಗೆ ಅಮೆರಿಕನ್ ಬಿಲಿಯನೇರ್ ಡೇವಿಡ್ ಬ್ಲಿಟ್ಜರ್ ಎಂಟ್ರಿ



















