ದಾವಣಗೆರೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ದೂರು ದಾಖಲಾಗಿದೆ.
ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದೂರು ದಾಖಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಸ್ವಾಮೀಜಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಶಿವರಾಮು ಕೂಡಲೇ ಬಹಿರಂಗವಾಗಿ ಕ್ಷಮೆ ಕೋರಬೇಕು. ನಾವು ಕೂಡ ಹೇಡಿಗಳಲ್ಲ ಎಂದು ಗುಡುಗಿದ್ದಾರೆ.
ಸ್ವಾಮೀಜಿ ಬಿಜೆಪಿ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಕಾವಿ ಬಿಚ್ಚಿ ರಾಜಕೀಯಕ್ಕೆ ಬರಲಿ. ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಶಿವರಾಮ್ ಹೇಳಿಕೆ ನೀಡಿದ್ದರು