ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಿ ವಿಡಿಯೋ ಪ್ರಸಾರ ಮಾಡಿದ ಷಡ್ಯಂತ್ರ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅವರಿಗೆ ಬಂಧನ ಭೀತಿ ಎದುರಾಗಿದೆ.
ಕೃಪಾ ಆಳ್ವ ಸೇರಿದಂತೆ ಆರು ಆರೋಪಿಗಳು ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಬೆಂಗಳೂರಿನ 66ನೇ ಸಿಸಿಹೆಚ್ ಸೆಷನ್ಸ್ ನ್ಯಾಯಾಲಯ ನವೆಂಬರ್ 20ರಂದು ವಜಾಗೊಳಿಸಿದೆ.
ನಿರೀಕ್ಷಣಾ ಜಾಮೀನು ತಿರಸ್ಕೃತಗೊಂಡ ಬೆನ್ನಲ್ಲೇ ಪ್ರಮುಖ ಆರೋಪಿಗಳಾದ ಕೃಪಾ ಆಳ್ವ, ಪ್ರಜ್ವಲ್ ಪ್ರಸಾದ್, ಚಂದನ್ ಹೆಚ್.ಎಸ್., ಮೋಹನ್ ಗೌಡ, ಪ್ರಶಾಂತ್ ಕುಮಾರ್ ಮತ್ತು ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರಿಂದ ಬಂಧನವಾಗುವ ಭೀತಿ ಎದುರಾಗಿದೆ.

















