ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರಿಗೆ ಸ್ಟಿಂಗ್ ಆಪರೇಷನ್ ಉರುಳಾಗಿದ್ದು, ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಮುಂದಿನ 6 ವರ್ಷಗಳ ಕಾಲ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ನಡೆದಿದ್ದ ಸ್ಟಿಂಗ್ ಆಪರೇಷನ್ನಲ್ಲಿ ಕೃಪಾ ಆಳ್ವಾ ಅವರ ಹೆಸರು ಕೇಳಿಬಂದಿತ್ತು. ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷ ನೀಡಿದ್ದ ಶೋಕಾಸ್ ನೋಟಿಸ್ಗೆ ಕೃಪಾ ಆಳ್ವಾ ಅವರು ಯಾವುದೇ ಉತ್ತರ ನೀಡಿರಲಿಲ್ಲ. ನೋಟಿಸ್ಗೆ ನೀವು ಉತ್ತರ ನೀಡಿಲ್ಲ ಹಾಗೂ ನಿಮ್ಮ ಈ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಯಾಗಿದೆ ಎಂದು ತಿಳಿಸಿರುವ ಕಾಂಗ್ರೆಸ್ ಪಕ್ಷ, ಕೃಪಾ ಆಳ್ವಾ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಕಠಿಣ ಆದೇಶ ಹೊರಡಿಸಿದೆ.


















