ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೂವರು ಅಪ್ರತಪ್ತರು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದು, ಮೂವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಪಶ್ಚಿಮ ವಿಭಾಗ ಡಿಸಿಪಿ ಯತೀಶ್.ಎನ್, ಜೆಜೆ ನಗರ ಪೊಲೀಸ್ ಠಾಣೆಗೆ ಭೇಟಿ, ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡುವಂತೆ ಸೂಚಿಸಿದ್ದಾರೆ.
ಏನಿದು ಪ್ರಕರಣ?
ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಬೆಂಗಳೂರಿನ ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ನಡೆದಿದೆ.
ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಈ ವೇಳೆ ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿದೆ.
ತೇರಿನ ಮೇಲೆ ಅನ್ಯ ಕೋಮಿನವರಿಂದ ಕಲ್ಲು ಎಸೆದ ಆರೋಪ ಹೊರಿಸಲಾಗಿದೆ. ಓಂ ಶಕ್ತಿ ಮಾಲೆ ಧರಿಸಿದ್ದ ಮಗುವಿಗೆ ಕಲ್ಲೇಟು ಬಿದ್ದಿದೆ. ಘಟನೆ ಬಳಿಕ ಓಂ ಶಕ್ತಿ ಮಾಲಾಧಾರಿಗಳು ಜೆಜೆಆರ್ ನಗರ ಠಾಣೆಯ ಮುಂದೆ ಜಮಾಯಿಸಿ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕಲ್ಲು ಎಸೆದ ಕಿಡಿಗೇಡಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಈ ಸಂಬಂಧ ಇದೀಗಾ ಮೂವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಇದನ್ನೂ ಓದಿ: ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ | ಬಾಲಕಿ ತಲೆಗೆ ಗಾಯ ; ದುಷ್ಕರ್ಮಿಗಳ ವಿರುದ್ಧ FIR ದಾಖಲು



















