ನಟ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾ ಗೆದ್ದ ಖುಷಿಯಲ್ಲಿದ್ದರೂ ಅವರಿಗೆ ಸಂಕಷ್ಟಗಳು ಎದುರಾಗುತ್ತಲೇ ಇವೆ.
ಸಂಧ್ಯಾ ಚಿತ್ರಮಂದಿರದಲ್ಲಿ ‘ಪುಷ್ಪ 2’ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆ ಸಾವನ್ನಪ್ಪಿ, ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಮನೆಯ ಎದುರು ಪ್ರತಿಭಟನೆ ನಡೆಸಲಾಗಿದೆ.
ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದ್ದು, ಈ ವೇಳೆ ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಜ್ಯುಬಿಲಿ ಹಿಲ್ಸ್ನಲ್ಲಿ ಇರುವ ಅಲ್ಲು ಅರ್ಜುನ್ ನಿವಾಸದ ಎದುರು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ‘ಪುಷ್ಪ 2’ ಸಿನಿಮಾ 1500 ಕೋಟಿ ರೂ. ಗೂ ಅಧಿಕ ಕಲೆಕ್ಷನ್ ಕಂಡಿದೆ. ಈ ಖುಷಿಯನ್ನು ಸರಿಯಾಗಿ ಸಂಭ್ರಮಿಸಲು ಅಲ್ಲುಗೆ ಸಾಧ್ಯವಾಗುತ್ತಿಲ್ಲ.