ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡರೊಬ್ಬರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜು ಎಂಬುವವರ ಮನೆಯ ಮೇಲೆ ರಾತ್ರಿ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಪುಡಿಪುಡಿಯಾಗಿವೆ. ಹೂವಿನ ಕುಂಡಗಳು ಛಿದ್ರ ಛಿದ್ರವಾಗಿ ಬಿದ್ದಿವೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.