ಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಐಟಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಸ್ಥಾಪಿಸಲಾದ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 24 ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI)
ಒಟ್ಟು ಹುದ್ದೆಗಳು: 24
ಹುದ್ದೆಗಳ ಹೆಸರು: ಅಸಿಸ್ಟಂಟ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 12
ಅಸಿಸ್ಟಂಟ್, ಮೆಂಬರ್ ಟೆಕ್ನಿಕಲ್ ಸ್ಟಾಫ್, ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಎ, ಎಂಸಿಎ, ಎಂಎಸ್ಸಿ, ಎಂ.ಟೆಕ್, ಪಿಎಚ್.ಡಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ 56,100 ರೂ.ನಿಂದ 1.77 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ stpi.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ



















