ಮೈಸೂರು: ಮಹಿಳೆಯರಿಗೆ ಸಾಲ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳು ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ವಿಷಯಗಳು ಬಹಿರಂಗವಾಗುತ್ತಿವೆ. ಹೀಗಾಗಿ ಈ ಕುರಿತು ವಿಶೇಷ ಕಠಿಣ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಭೇಟಿ ಮಾಡಿದ್ದ ರೈತರೊಂದಿಗೆ ಚರ್ಚಿಸಿದ ಅವರು, ”ಮಹಿಳಾ ಸ್ವಸಹಾಯ ಸಂಘಗಳಿಗೆ ಖಾಸಗಿ ಫೈನಾನ್ಸ್ಗಳು ವಸೂಲಿ ಹೆಸರಲ್ಲಿ ಕಿರುಕುಳ ನೀಡುತ್ತಿರುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಕೃಷಿ ಚಟುವಟಿಕೆ ಮಾಡುವ ರೈತರಿಗೆ ಯಾವುದೇ ತೆರಿಗೆ ವಿಧಿಸಿಲ್ಲ. ರೈತ ಉತ್ಪಾದಕ ಸಂಸ್ಥೆಗಳಿಗೆ ಎಂಎಟಿ ತೆರಿಗೆ ಕೂಡ ಇರುವುದಿಲ್ಲ ಎಂದು ಕೂಡ ಸಚಿವರು ಹೇಳಿದ್ದಾರೆ. ಈ ವೇಳೆ ರೈತರು ಹಲವು ಬೇಡಿಕೆ ಈಡೇರಿಕೆಗೆ ಮನವಿ ಮಾಡಿದರು.