ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಪೈನಾನ್ಸ್ ಕಿರುಕುಳಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ. ಈಗಾಗಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಒಳಗಾಗಿರುವ ಜನರು ಹಲವು ತೊಂದರೆಗಳನ್ನು ಎದುರಿಸಿದ್ದಾರೆ. ಕೆಲವರು ಆತ್ಮಹತ್ಯೆಯ ಹಾದಿ ಹಿಡಿದರೆ, ಇನ್ನೂ ಕೆಲವರು ಊರು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರು ನ್ಯಾಯಕ್ಕಾಗಿ ಸರ್ಕಾರದ ಮೊರೆ ಹೋಗಿದ್ದರು. ಹೀಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಹೊಸ ಬಿಲ್ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಫೈನಾನ್ಸ್ ಕಿರುಕುಳಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರ, ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಟ್ಸಿಟ್ಯೂಷನ್ ಆಫ್ ರೆಗುಲೇಷನ್ ಆಫ್ ಮನಿ ಲೆಂಡಿಂಗ್ ಬಿಲ್ ತರಲು ನಿರ್ಧರಿಸಲಾಗಿದೆ.
ಹೊಸ ಕಾಯ್ದೆಯಲ್ಲಿ ಮೂರು ಪ್ರಮುಖ ಅಂಶಗಳು..
- ಮೈಕ್ರೋ ಫೈನಾನ್ಸ್ ಕಿರುಕುಳ ಕಾಗ್ನಿಜಬಲ್ ಅಫೆನ್ಸ್ ಅಂತ ಪರಿಗಣಿಸುವುದು
- ಈ ಹೊಸ ಕಾನೂನಿನ ಅಡಿ ಕೇಸ್ ದಾಖಲಿಸಿದರೆ ಅದು ಜಾಮೀನು ರಹಿತ
- ಈ ಹೊಸ ಕಾಯ್ದೆಯ ಪ್ರಕಾರ ಮೂರು ವರ್ಷ ಕಠಿಣ ಶಿಕ್ಷೆ ವಿಧಿಸುವುದು
ಮೂರು ಪ್ರಮುಖ ಅಂಶಗಳೊಂದಿಗೆ ಕಾನೂನು ಇಲಾಖೆ ಕಾಯ್ದೆ ಸಿದ್ದಪಡಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ ಇಂಗಿತ ವ್ಯಕ್ತಪಡಿಸಿದ್ದಾರೆ.