ಮುಂಬೈ: ಇದೇ ಅಕ್ಟೋಬರ್ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.
ಟಿ20 ಸರಣಿಗೆ ನಿರೀಕ್ಷೆಯಂತೆ ಸೂರ್ಯಕುಮಾರ್ ಯಾದವ್ ನಾಯಕನಾಗಿದ್ದಾರೆ. ಆದ್ರೆ ರೋಹಿತ್, ಕೊಹ್ಲಿ ತಂಡದಲ್ಲಿದ್ದರೂ ಏಕದಿನ ಕ್ರಿಕೆಟ್‌ಗೆ ನೂತನ ನಾಯಕನಾಗಿ ಶುಭಮನ್ ಗಿಲ್ ಅವರನ್ನ ಆಯ್ಕೆ ಮಾಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ನಿವೃತ್ತಿಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಅಕ್ಷರ್ ಪಟೇಲ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ , ಮೊಹಮ್ಮದ್ ಸಿರಾಜ್ , ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ , ಯಶಸ್ವಿ ಜವಾಲ್ .
ಭಾರತ ಟಿ20 ತಂಡ : ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್ ( ಉಪನಾಯಕ ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ , ಶಿವಂ ದುಬೆ , ಅಕ್ಷರ್ ಪಟೇಲ್, ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಅರ್ಷ್‌ದೀಪ್ ಸಿಂಗ್, ಕುಲ್ದೀಪ್ ಯಾದವ್ , ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್ , ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.