ಕೊಪ್ಪಳ: ಕಾಂಗ್ರೆಸ್ (Congress) ದುರಾಡಳಿತದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಶಾಸಕ ಜನಾರ್ದನ ರೆಡ್ಡಿ (G. Janardhana Reddy) ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಬಿಜೆಪಿ (BJP) ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ಮಸೂದೆ ದುರುಪಯೋಗ ಮಾಡಿಕೊಂಡ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ ಕಾರ್ಯವನ್ನು ಈ ಕಾಂಗ್ರೆಸ್ (Congress) ಸರ್ಕಾರ ಮಾಡುತ್ತಿದೆ. ಈ ಸರ್ಕಾರ ಜಮೀರ್ ಎನ್ನುವ ‘420’ ಸಚಿವನನ್ನು ಇಟ್ಟುಕೊಂಡು ಎಲ್ಲ ಭೂಮಿ ವಶಪಡಿಸಿಕೊಳ್ಳಲು ತರಾತುರಿಯಲ್ಲಿ ಸಾವಿರಾರು ಎಕರೆಗೆ ವಕ್ಫ್ ಹೆಸರು ಸೇರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಬೀಳಬಹುದು ಎಂಬ ಕಾರಣಕ್ಕೆ ಭಯದಲ್ಲಿ ಸಿಎಂ ಅವರು ಮೌಖಿಕವಾಗಿ ನೋಟಿಸ್ ಹಿಂಪಡೆಯುವಂತೆ ಸೂಚಿಸಿದ್ದಾರೆ. ಇದು ಕೇವಲ ಕಣ್ಣೋರೆಸುವ ತಂತ್ರ. ಕೂಡಲೇ ಎಮರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಮಾಡಿ ರದ್ದುಗೊಳಿಸಬೇಕಿತ್ತು. ಆದರೆ ಮೌಖಿಕವಾಗಿ ಹೇಳುವ ಮೂಲಕ ರೈತರ ಶಾಪಕ್ಕೆ ಗುರಿಯಾಗುತ್ತಾರೆ. ಅಹಿಂದ ಹೆಸರಲ್ಲಿ ಸಿಎಂ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ವಿನಾಶಕಾಲಕ್ಕೆ ವಿಪರೀತ ಬುದ್ಧಿ ಬಂದಿದೆ ಎಂದು ಆರೋಪಿಸಿದ್ದಾರೆ.