ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಮೊಂತಿಮಾರ್ ಪಡ್ಪು ಪ್ರದೇಶದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಭೀಕರವಾಗಿ ದಾಳಿ ನಡೆಸಿದ ಘಟನೆ ನಡೆದಿದೆ.
ಸ್ಥಳೀಯ ವ್ಯಾಪಾರಿ ಜವ್ವರ್ ಎಂಬಾತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ದಾಳಿಯಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಸ್ಥಳೀಯರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಬಳಿಕ ಆರೋಪಿ ಜವ್ವರ್ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಶರಣಾಗಿದ್ದಾನೆ. ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!



















