ಮೈಸೂರು : ನಂಜನಗೂಡು ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರೂ ಕೂಡ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ತ್ರಿಶಾಲ (15) ಮೃತ ದುರ್ದೈವಿ. ಈಕೆ 625ಕ್ಕೆ 440 ಅಂಕಗಳನ್ನು ಪಡೆದಿದ್ದರೂ, ಡಿಸ್ಟಿಂಕ್ಷನ್ ಬರಲಿಲ್ಲವೆಂದು ಬೇಸರಗೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!


















