ಲಕ್ನೋ: ಐಐಐಟಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಲಹಾಬಾದ್‌ನ (Allahabad) ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ರಾತ್ರಿ ಹಾಸ್ಟೆಲ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಯಾಗರಾಜ್‌ನ (Prayagraj) ಝಲ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಶೇಷಚೇತನ ವಿದ್ಯಾರ್ಥಿ ರಾಹುಲ್ ಮದಲ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷೆಯಲ್ಲಿ ಅನುತ್ತೀರ್ಣನಾದ ನಂತರ ಬೇಸರಗೊಂಡಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.