ಬೆಂಗಳೂರು : ಬೆಂಗಳೂರಿನಲ್ಲಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
21 ವರ್ಷದ ಲಕ್ಷ್ಮ ಮಿಶ್ರಾ ಮೃತ ವಿದ್ಯಾರ್ಥಿಯಾಗಿದ್ದು, ಅವರು ದ್ವಿತೀಯ ಪಿಯುಸಿ ಓದುತ್ತಿದ್ದರು. ಮೂಲತಃ ಜಾರ್ಖಂಡ್‌ನ ರಾಂಚಿ ನಿವಾಸಿಯಾಗಿದ್ದ ಅವರು, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ಯಲಹಂಕದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಇಂದು ನಸುಕಿನ ಜಾವ ಸುಮಾರು 3 ಗಂಟೆ ವೇಳೆ ಹಾಸ್ಟೆಲ್‌ನ 9ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ್ಯುವಿನ ನಿಖರ ಕಾರಣವನ್ನು ತಿಳಿದುಕೊಳ್ಳಲು ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಆಕಸ್ಮಿಕ ಬೆಂಕಿ.. ಕಾರಿನೊಂದಿಗೆ ಚಾಲಕನೂ ಸುಟ್ಟು ಕರಕಲು



















