ಮಂಡ್ಯ: ಪುಡ್ ಪಾಯ್ಸನ್ ನಿಂದ ವಿದ್ಯಾರ್ಥಿ ಸಾವನ್ನಪ್ಪಿರುವ ಪ್ರಕರಣಕ್ಕ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ.
ಸಚಿವ ಚೆಲುವರಾಯಸ್ವಾಮಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಿಮ್ಸ್ ಗೆ ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಬಳಿಕ ಸಚಿವರು ಪ್ರಕರಣ ದಾಖಲಿಸಲು ಸೂಚಿಸಿದ್ದರು.
ಈ ಘಟನೆ ನಡೆದಿರುವ ಅನಾಥಾಶ್ರಮದಲ್ಲಿ ಮೇಘಾಲಯದಿಂದ ಮಕ್ಕಳನ್ನು ಅಡಪ್ಟ್ ಮಾಡಿಕೊಳ್ಳಲಾಗಿದೆ. ಹೀಗಾಗಿ ಇದಕ್ಕೆ ಕಾನೂನು ವ್ಯಾಪ್ತಿಯಲ್ಲಿ ಅನುಮತಿ ಇದೆಯಾ? ಎಂಬ ಕುರಿತು ಕೂಡ ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ನಿಯಮಗಳನ್ನು ಗಾಳಿಗೆ ತೂರಿ ಆ ಶಾಲೆ ನಡೆಸಲಾಗುತ್ತಿದೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲು ಮಾಡುವಂತೆ ಸೂಚನೆ ನೀಡಿದ್ದೇನೆ. ಮೃತ ಮಗುವಿನ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಸರ್ಕಾರ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದೆ. ಪ್ರಕರಣದ ಮಾಹಿತಿಯನ್ನ ಸಿಎಂ ಪಡೆದುಕೊಂಡಿದ್ದಾರೆ. ಮಕ್ಕಳ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸಲಿದ್ದೇವೆ. ಈ ಕುರಿತು ತನಿಖೆ ನಡೆದ ನಂತರ ಸಂಪೂರ್ಣ ಮಾಹಿತಿ ಹೊರ ಬರಲಿದೆ ಎಂದಿದ್ದಾರೆ.