ಹಾವೇರಿ: ಹೋರಿ ತಿವಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ(Haveri) ಜಿಲ್ಲೆಯ ಬ್ಯಾಡಗಿ(Byadagi) ತಾಲೂಕಿನ ಚಿನ್ನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೋರಿ ಬೆದರಿಸುವ ಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಈ ಘಟನೆ ನಡೆದಿದೆ. ಹೋರಿ ಬೆದರಿಸಲು ಬಂದಿದ್ದ 15 ವರ್ಷದ ಬಾಲಕ ವಸಂತ ವೀರಾಪುರ ಸಾವನ್ನಪ್ಪಿರುವ ದುರ್ದೈವಿ.
ಸಾವನ್ನಪ್ಪಿರುವ ವಿದ್ಯಾರ್ಥಿ ಬ್ಯಾಡಗಿ ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಾಲೆಗೆ ಹೋಗುತ್ತೇನೆ ಎಂದು ಹೇಳಿ ಹೋರಿ ಹಬ್ಬಕ್ಕೆ ತೆರಳಿದ್ದ. ಈ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.