ಬೆಂಗಳೂರು: ಮೊಬೈಲ್ ಚಾರ್ಜ್ ಮಾಡುವ ವೇಳೆ ಶಾಕ್ ನಿಂದಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಶ್ರೀನಿವಾಸ್ (24) ಎಂದು ಗುರುತಿಸಲಾಗಿದ್ದು, ಈತ ಬೀದರ್ ಮೂಲದ ವಿದ್ಯಾರ್ಥಿ ಎನ್ನಲಾಗಿದೆ.
ಶ್ರೀನಿವಾಸ್, ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್ ವೇರ್ ಕೋರ್ಸ್ ಓದುತ್ತಿದ್ದ. ಆದರೆ, ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪಿಜಿಯಲ್ಲಿ ತನ್ನ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ಎಲೆಕ್ಟ್ರಿಕ್ ಶಾಕ್ ನಿಂದ ಆತ ಸಾವನ್ನಪ್ಪಿದ್ದಾನೆ.
ಚಾರ್ಜಿಂಗ್ ವೈರ್ ಅಥವಾ ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ಪ್ರಹರಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
