ಬೆಂಗಳೂರು: ಬಾಲಕಿಯೋರ್ವಳು ತಲೆ ತಿರುಗಿ ಶಾಲೆಯ ಎರಡನೇ ಮಹಡಿಯಿಂದ ಬಿದ್ದಿರುವ ಘಟನೆಯೊಂದು ನಡೆದಿದೆ.
ಕೃತಿಕಾ (16) ಎರಡನೇ ಫ್ಲೋರ್ ನಿಂದ ಕೆಳಗಡೆ ಬಿದ್ದ ವಿದ್ಯಾರ್ಥಿನಿ. ಮಲ್ಲೇಶ್ವರಂ 13ನೇ ಕ್ರಾಸ್ ನ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕೃತಿಕಾ ಕೆಳ ಬೀಳುತ್ತಿದ್ದಂತೆ ಅಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಕ್ಷಿಸಿದ್ದಾರೆ. ಸದ್ಯ ಕೃತಿಕಾ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃತಿಕಾ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇಂದು ಮದ್ಯಾಹ್ನ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಬಾಲಕಿಯ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.